ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ, ದ. ಕ. ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು ಹಳೆಯಂಗಡಿ ಇದರ ಆಶ್ರಯದಲ್ಲಿ ನಮ್ಮ ತುಳುನಾಡಿನ ಪ್ರಮುಖ ಆಚರಣೆಗಳಲ್ಲಿ ಒಂದಾದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ ಪರ್ಬ -2023 ಕಾರ್ಯಕ್ರಮವು ದಿನಾಂಕ ಮಂಗಳವಾರ ಬೆಳಿಗ್ಗೆ ಘಂಟೆ 9:30 ರಿಂದ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು.
ಖ್ಯಾತ ರಂಗ ಭೂಮಿ ಕಲಾವಿದರು ಹಾಗೂ ಕನ್ನಡ ಮತ್ತು ತುಳು ಚಲನ ಚಿತ್ರ ನಟ ಪ್ರಕಾಶ್ ತುಮಿನಾಡ್ ಇವರು ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ತುಳುನಾಡ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಿರುವ ತುಳುನಾಡ ತುಡರ್ ಪರ್ಬ ಮತ್ತು ಬಲಿಂದ್ರ ಪೂಜೆಯ ಮಹತ್ವದ ಬಗ್ಗೆ ಮಾತನಾಡಿದರು. ಗೋವಿಂದದಾಸ ಕಾಲೇಜು , ಸುರತ್ಕಲ್ ಇಲ್ಲಿನ ಪ್ರಾಂಶುಪಾಲರು ಕೃಷ್ಣಮೂರ್ತಿ.ಪಿ , ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಸಂಸ್ಥೆಯ ಜನ ಸೇವೆಗೆ ಹಲವು ಪ್ರಶಸ್ತಿಗಳು ದೊರಕಿರುವುದನ್ನು ಶ್ಲಾಘಿಸಿ ಶುಭಹಾರೈಸಿದರು ಹಾಗೂ ತುಳುನಾಡ ತುಡರ್ ಪರ್ಬವನ್ನು ಹೇಗೆ ಆಚರಿಸಬೇಕು ಮತ್ತು ಮುಂದಿನ ಜನಾಂಗಕ್ಕೆ ಹೇಗೆ ಮನದಟ್ಟು ಮಾಡಬೇಕು ಇದರ ಬಗ್ಗೆ ಸವಿಸ್ತಾರವಾಗಿ ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಸಹಾಯಕ ಪ್ರಾಧ್ಯಾಪಕರು ಎನ್. ಐ. ಟಿ.ಕೆ ಸುರತ್ಕಲ್ ಇಲ್ಲಿನ ಸತ್ಯನಾರಾಯಣ. ಎನ್. ಇವರು ಸಂಸ್ಥೆಯ ಕಾರ್ಯ ವೈಖರಿಯ ಬಗ್ಗೆ ಶ್ಲಾಘಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷರು ಪ್ರಶಾಂತ್ ಕುಮಾರ್ ಬೇಕಲ್, ಅಧ್ಯಕ್ಷರು ಜಗದೀಶ್ ಕುಲಾಲ್, ಮಹಿಳಾ ಕಾರ್ಯಾಧ್ಯಕ್ಷೆ ಯಶೋಧಾ ದೇವಾಡಿಗ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು ಇಲ್ಲಿನ ಉಪಾಧ್ಯಕ್ಷರಾದ ಹೇಮನಾಥ ಅಮೀನ್, ಸದಸ್ಯ ಶ್ರೀ ಮೋಹನ್ ದಾಸ್ , ಶಾರದಾ ಆರ್ಟ್ಸ್ ಮಂಜೇಶ್ವರ ನಾಟಕ ತಂಡ ಇದರ ಸಂಗೀತ ನಿರ್ದೇಶಕರಾದ ಶ್ರೀ ಗಣೇಶ್ ಕೊಡಕ್ಕಲ್, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾಗಿರುವ ಶ್ರೀ ಯೋಗೀಶ್ ಕೋಟ್ಯಾನ್, ಕ್ಲಬ್ ನ ಗೌರವ ಸಲಹೆಗಾರರಾದ ಹರಿಪ್ರಸಾದ್ ಶೆಟ್ಟಿ ಬೆಂಗಳೂರು, ಶ್ರೀ ಗಣೇಶ್ ಪೂಜಾರಿ, ಬೆಂಗಳೂರು, ಕಲ್ಲಾಪು ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲದ ಅಧ್ಯಕ್ಷರು ಶ್ರೀ ನವೀನ್ ಶೆಟ್ಟಿಗಾರ್, ಸಾಮಾಜಿಕ ಕಾರ್ಯಕರ್ತ ಧರ್ಮನಂದ ಶೆಟ್ಟಿಗಾರ್, ಕ್ಲಬ್ ನ ಉಪಾಧ್ಯಕ್ಷ ಸುನಿಲ್ ದೇವಾಡಿಗ,ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು, ನೃತ್ಯ ತರಗತಿಯ ಮಕ್ಕಳು, ಮಕ್ಕಳ ಪೋಷಕರು, ಗ್ರಾಮಸ್ಥರು ಹಾಗೂ ಮತ್ತಿತರರು, ಉಪಸ್ಥಿತರಿದ್ದರು. ಮಹಿಳಾ ಸಮಿತಿಯ ಸದಸ್ಯೆಯರಾದ ಶೋಭಾ ಅಂಚನ್, ವಾಣಿ ಮಹೇಶ್ ಮತ್ತು ಶ್ರೀಮತಿ ಮೀನಾಕ್ಷಿ ದೇವಾಡಿಗ ಪ್ರಾರ್ಥಿಸಿದರು. ಅಧ್ಯಕ್ಷರಾದ ಜಗದೀಶ್ ಕುಲಾಲ್ ಸ್ವಾಗತಿಸಿದರು. ಪರಿಸರ ಸಂರಕ್ಷಣಾ ಕಾರ್ಯದರ್ಶಿ ಸಂಪತ್ ದೇವಾಡಿಗ ವಂದಿಸಿದರು. ಕಾರ್ಯಾಧ್ಯಕ್ಷರಾದ ಸಂತೋಷ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಅನಂತರ ಸ್ಪೋರ್ಟ್ಸ್ ಕ್ಲಬ್ ನ ನೃತ್ಯ ತರಗತಿಯ ಪುಟಾಣಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…