ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ತಂಡಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಹೂಗುಚ್ಛ ನೀಡುವುದರ ಮೂಲಕ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಕುಶಲ್ ಶೆಟ್ಟಿ, ಗಣೇಶ್ ನೆರ್ಗಿ, ಚಂದ್ರಮೋಹನ್ ಚಿಟ್ಪಾಡಿ, ಶರತ್ ಶೆಟ್ಟಿ, ಮಮತಾ ಶೆಟ್ಟಿ, ಸೌರಭ್ ಬಲ್ಲಾಳ್, ಶ್ರೀನಿವಾಸ್ ಹೆಬ್ಬಾರ್, ಕೃಷ್ಣ ಹೆಬ್ಬಾರ್, ಯತೀಶ್ ಕರ್ಕೇರ, ನಾಸಿರ್ ಯಾಕೂಬ್, ಶೇಖ್ ವಾಹಿದ್, ಹಸನ್ ಸಾಹೇಬ್, ತುಳಸಿದಾಸ್, ನವೀನ್ ಶೆಟ್ಟಿ, ಸತೀಶ್ ಕೊಡವೂರು, ಆನಂದ್ ಪೂಜಾರಿ, ಧನಂಜಯ್ ಕುಂದರ್, ಸುರೇಂದ್ರ ಆಚಾರ್ಯ, ಸುಮನಾ ಆಚಾರ್ಯ, ಅರ್ಚನಾ ದೇವಾಡಿಗ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…