ಮುಲ್ಕಿ: ಇಲ್ಲಿಗೆ ಸಮೀಪದ ಪಡುಪಣಂಬೂರು ಪಡು ತೋಟ ನಿವಾಸಿ ಗುರಿಕಾರ ಸಂಜೀವ ಪೂಜಾರಿ ಸಾನದ ಮನೆ ( 81) ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ 2 ಪುತ್ರರು ಹಾಗೂ 5ಪುತ್ರಿಯರನ್ನು ಅಗಲಿದ್ದಾರೆ.
ಅವರು ಪಡುಪಣಂಬೂರು ಪಡು ತೋಟದ ಊರಿನ ಗುರಿಕಾರರಾಗಿ, ಪ್ರತಿಷ್ಠಿತ ಸುವರ್ಣ ಮೂಲಸ್ಥಾನದ ಪೂಜಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಪಡುಪಣಂಬೂರು ಪರಿಸರದಲ್ಲಿ ಕೊಡುಗೈ ದಾನಿಯಾಗಿ ತಮ್ಮ ಸಾಮಾಜಿಕ ಚಟುವಟಿಕೆಗಳಿಂದ ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಪಡುಪಣಂಬೂರು ಗ್ರಾ.ಪಂ. ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಸದಸ್ಯ ವಿನೋದ್ ಸಾಲ್ಯಾನ್, ಹರಿಪ್ರಸಾದ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ನಿರ್ದೇಶಕ ಶಾಮ್ ಪ್ರಸಾದ್,ಉಪಾಧ್ಯಕ್ಷ ಹೇಮನಾಥ ಅಮೀನ್, ಪಡುಪಣಂಬೂರು ಪಡುತೋಟ ಸುವರ್ಣ ಮೂಲಸ್ಥಾನದ ವಿಜಯಕುಮಾರ್, ಸುಚೇಂದ್ರ ಅಮೀನ್, ಅರಸು ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್,ಗೌತಮ್ ಜೈನ್ ಮುಲ್ಕಿ ಅರಮನೆ, ಮುಂಬೈ ಬಂಟರ ಸಂಘದ ಮಾಜೀ ಅಧ್ಯಕ್ಷ ಭುಜಂಗ ಶೆಟ್ಟಿ, ದಿನೇಶ್ ಸುವರ್ಣ ಬೆಳ್ಳಾಯರು ದಾಮೋದರ ಸಾಲ್ಯಾನ್, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಪುನೀತ್ ಕೃಷ್ಣ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…