ಸಜೀಪ ಮುನ್ನೂರು ಗ್ರಾಮದ ಮಂಜಲ್ಪಾದೆಯ ಗುಡ್ಡದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರವೀಣ್, ರಂಜಿತ್,
ನವೀನ್, ಪ್ರವೀಣ್ ಪೂಜಾರಿ, ಹರೀಶ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ಬಂಟ್ವಾಳ ಪೊಲೀಸರ ನೇತೃತ್ವದ
ತಂಡ ದಾಳಿ ನಡೆಸಿದೆ. ದಾಳಿಯ ವೇಳೆ ಸ್ಥಳದಲ್ಲಿದ್ದ 1, 520 ರೂ. ನಗದು, 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



