ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ನಡೆಯುವ ಸಾಹಿತ್ಯ ಸಮಾವೇಶದ ಪೂರ್ವಭಾವಿ ಸಭೆಯು ಗಣಪತಿ ವಿದ್ಯಾ ಕೇಂದ್ರ ಪುಣ್ಯಕೋಟಿ ನಗರ ಕೈರಂಗಳ ಮುಡಿಪು ಇಲ್ಲಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಮ ಭಟ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವಿವಿಧ ಸಾಹಿತ್ಯ ಪ್ರಸ್ತುತಿ ಹಾಗೂ ಸಾಂಸ್ಕೃತಿಕ ಗೋಷ್ಟಿಗಳೊಂದಿಗೆ ಕೈರಂಗಳ ಪುಣ್ಯಕೋಟಿ ನಗರ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಡಿಸೆಂಬರ್ 1 ರಂದು ನಡೆಸಲಾಗುವುದು ಎಂದು ಅಭಾಸಾಪ. ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಡಾ.ಸುರೇಶ ನೆಗಳಗುಳಿ ಪ್ರಕಟಿಸಿ ರಾಷ್ಟ್ರೀಯ ಚಿಂತನೆಯ ಕಾರ್ಯಕಮದ ಯಶಸ್ಸಿಗೆ ಸಾಹಿತ್ಯಾಭಿಮಾನಿಗಳ ಸಹಕಾರ ಅಗತ್ಯವೆಂದು ತಿಳಿಸಿದರು.
ಅ.ಭಾ.ಸಾ.ಪ.ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಕವನ ಕಾವ್ಯ ವಾಚನ,ದೇಶ ಭಕ್ತಿ ಗೀತೆ,ಹಾಡುನೃತ್ಯ,ರಸಪ್ರಶ್ನೆ,ಪೌರಾಣಿಕ ಪಾತ್ರ ನಿರೂಪಣೆ,ವಿದ್ಯಾರ್ಥಿ ಕವಿಗೋಷ್ಟಿಗಳನ್ನು ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗಾಗಿ ಸಂಯೋಜಿಸಲಾಗುವುದು ಎಂದು ಸಮಾವೇಶದ ರೂಪುರೇಷೆ ತಿಳಿಸಿದರು.
ಅಭಾಸಾಪ ಉಪಾಧ್ಯಕ್ಷ ಈಶ್ವರ ಪ್ರಸಾದ ಕನ್ಯಾನ,ಕೋಶಾಧಿಕಾರಿ ಪ್ರಶಾಂತ ಕಲ್ಲಡ್ಕ,ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮೊಡಂಕಾಪು ಉಪಪ್ರಾಂಶು ಪಾಲೆ ರಮಣಿ ಭಂಡಾರಿ,ಕೈರಂಗಳ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಡಿ.ಲಮಾಣಿ, ಹಿರಿಯ ಶಿಕ್ಷಕ ಚಂದ್ರ ಕುಮಾರ್ ಉಪಸ್ಥಿತರಿದ್ದು ಸೂಕ್ತ ಸಲಹೆಗಳನ್ನಿತ್ತರು.ವಿದ್ಯಾಕೇಂದ್ರದ ಪ್ರಾಂಶುಪಾಲ ಶ್ರೀಹರಿ ಮಾರ್ಗದರ್ಶನ ದಲ್ಲಿ ಸ್ವಾಗತ ಸಮಿತಿ ರಚಿಸಲಾಯಿತು.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…