ಇಂದು ಮಧ್ಯಾಹ್ನ ಗುಜರಾತ್ ನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದ ವೀಕ್ಷಣೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ದೊಡ್ಡ ಪರದೆ ವ್ಯವಸ್ಥೆ ಮಾಡಿದೆ. ಕ್ರಿಕೆಟ್ ಪ್ರೇಮಿಗಳಿಗೆ ಇಲ್ಲಿ ಪಂದ್ಯ ವೀಕ್ಷಣೆಗೆ ಪ್ರವೇಶಾವಕಾಶ ಉಚಿತವಾಗಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.




