ನೇಜಾರು ಕೊಲೆ ಪ್ರಕರಣಕ್ಕೆ ಸಂಬAಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ದುಷ್ಕರ್ಮಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಹಫೀಝ್ ಮುಹಮ್ಮದ್ ಎಂಬಾತನು ತನ್ನ ಫೇಸ್ಬುಕ್ ಖಾತೆಯಲ್ಲಿ ‘ಪ್ರಿಪರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು” ಎಂಬ ಪೋಸ್ಟ್ನ್ನು ಹಾಕಿದ್ದಾರೆ. ಇದು ಸಾಕಷ್ಟು ವೈರಲ್ ಆಗಿದೆ. ಈತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟು ಜೀವಾವಧಿ ಶಿಕ್ಷೆಯಂತಹ ಅಪರಾಧವನ್ನು ಮಾಡಲು ಪ್ರಚೋದನೆ ನೀಡಿ, ವಿವಿಧ ವರ್ಗಗಳ ನಡುವೆ ದ್ವೇಷ ಸೃಷ್ಟಿಸುವ ಉದ್ದೇಶ ಹೊಂದಿರುವುದಾಗಿ ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.



