ಕೆಎಸ್ಆರ್‌ಟಿಸಿ ಇಲಾಖೆಯ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಸ್ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೀಳಗಿ ಡಿಪೋದಲ್ಲಿ ನಡೆದಿದೆ.
ಚಾಲಕ ಮಲ್ಲಿಕಾರ್ಜುನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಅಧಿಕಾರಿ. 3 ದಿನಗಳಾದರೂ ಮೇಲಧಿಕಾರಿ ರಜೆ ಕೊಡದೆ ನಿರಂತರವಾಗಿ ಕೆಲಸ ಮಾಡಿಸುತ್ತಿದ್ದಾರೆ. ಇದರಿಂದ ಮನನೊಂದಿರುವ ಚಾಲಕ ಮಲ್ಲಿಕಾರ್ಜುನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಸಂಬಂಧಿಕರು, ಅವರನ್ನು ಸ್ಥಳೀಯ ಬೀಳಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಬೀಳಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಮುಂದುವರೆಸಲಾಗಿದೆ. ಸದ್ಯ ಚಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ತನ್ನ ಈ ಸ್ಥಿತಿಗೆ ಡಿಪೋದ ಮೇಲಧಿಕಾರಿ ಕಾಡರಕೊಪ್ಪ ಎಂಬುವವರೇ ಕಾರಣ. ಅವರ ಕಿರುಕುಳದಿಂದ ಹೀಗೆ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…