ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಹಾಗೂ ಸಹಕಾರ ಶಿಕ್ಷಣ, ತರಬೇತಿಯ ಪರಿಷ್ಕರಣೆ ದಿನ, ಸೊಸೈಟಿಯ ನವೀಕೃತ ಹವಾನಿಯಂತ್ರಿತ ಸಭಾಂಗಣ ಉದ್ಘಾಟನೆ, ಸನ್ಮಾನ ಮತ್ತು ಕೃಷಿ ಸಹಾಯಧನ ವಿತರಣಾ ಸಮಾರಂಭವು ಪಡುಬಿದ್ರಿ ಸಹಕಾರ ಸಂಗಮ ವೈ ಲಕ್ಷ್ಮಣ ಸಭಾಂಗಣದಲ್ಲಿ ನಡೆಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನವೀಕೃತ ಹವಾ ನಿಯಂತ್ರಿತ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕಯ್ ಶೆಟ್ಟಿ ಇಂದ್ರಾಳಿ, ಬೆಳಪು ಸರಕಾರಿ ಮಹಾಮಂಡಲದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ ವೈ, ಕುಂದಾಪುರ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ ಉಪಸ್ಥಿತರಿದ್ದರು.



