ಮೂಡುಬಿದಿರೆ:ಕಲ್ಲಬೆಟ್ಟು ಎಕ್ಸಲೆಂಟ್ ಸಮೂಹಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶಿಕ್ಷಣ ರತ್ನ ಯುವರಾಜ್ ಜೈನ್ ಅವರಿಗೆ ಅಭಿನಂದನಾ ಸಮಾರಂಭವನ್ನು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಾಜ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿಯಾದ ರಶ್ಮಿತಾ ಜೈನ್ ಅವರು ಹೇಳಿದ್ದಾರೆ.


ಇವರು ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ನ್ಯೂ ಡೆಲ್ಲಿಯಿಂದ ‘ಗ್ಲೋಬಲ್ ಅಂಬಾಸೀಡರ್ ಆಫ್ ಎಜ್ಯುಕೇಶನ್ ಎಕ್ಸಲೆನ್ಸ್ ಅವಾಡ್೯’ ಹಾಗೂ ಮೂಡುಬಿದಿರೆಯ ‘ಸಮಾಜ ಮಂದಿರ ಪುರಸ್ಕಾರ-2023’ ಸಹಿತ ವಿವಿಧ ಪುರಸ್ಕಾರಗಳಿಗೆ ಬಾಜನರಾಗಿರುವ ಯುವರಾಜ್ ಜೈನ್ ಅವರು ಕಳೆದ 11 ವರ್ಷಗಳಿಂದ ಶಿಕ್ಷಣ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಸಂಸ್ಥೆಯನ್ನು ರಾಜ್ಯ ರಾಷ್ಟ್ರಮಟ್ಟದಲ್ಲಿ ಬೆಳೆಸಿ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ. ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳ ಮೂಲಕವೂ ಸಮಾಜಮುಖಿಯಾಗಿ ಗುರುತಿಸಿಕೊಂಡಿರುವ ಅವರು ಮೂಡುಬಿದಿರೆ ಟೆಂಪಲ್ ಟೌನ್‌ನ ಸ್ಥಾಪಕಾಧ್ಯಕ್ಷರಾಗಿ, ಜೇಸಿಯ ಅಧ್ಯಕ್ಷರಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ರಾಷ್ಟ್ರೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ವಿವಿಧ ಸಂಘ ಸಂಸ್ಥೆಗಳ ಗೌರವಕ್ಕೆ ಪಾತ್ರರಾಗಿದ್ದಾರೆ ಅಂತ ಹೇಳಿದ್ದಾರೆ.



