ಉಡುಪಿ:ಉಡುಪಿ ಜಿಲ್ಲೆಯಲ್ಲಿ ನಡೆದಿರುವ ಬೈಲೂರು ಪರಶುರಾಮ ಥೀಂ ಪಾರ್ಕ್ನ ನಕಲಿ ಪ್ರತಿಮೆ ಪ್ರತಿಷ್ಠಾಪನೆ ವಿಚಾರ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿಕೆಯನ್ನ ನೀಡಿದ್ದಾರೆ.

ಉಡುಪಿಯಲ್ಲಿ ಮಾತಾನಾಡಿದ ಇವರು, ಪರಶುರಾಮ ಥೀಂ ಪಾರ್ಕ್ನ ನಕಲಿ ಪ್ರತಿಮೆಯ ವಿಚಾರವಾಗಿ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಂಬoಧಪಟ್ಟ ಸಚಿವರ ಗಮನಕ್ಕೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಆಗಿರುವ ಅವ್ಯವಾಹರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಅಂತ ಹೇಳಿದ್ರು.



