ಉಡುಪಿ:ರಂಗಭೂಮಿ ಉಡುಪಿ ಇದರ ವತಿಯಿಂದ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ನವೆಂಬರ್ 22ರಿಂದ ಡಿಸೆಂಬರ್ 3ರವರೆಗೆ ಉಡುಪಿ ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.


ಸಂಸ್ಥೆಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ. ಇವರು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ, ನ.22ರಂದು ನಾಟಕ ಸ್ಪರ್ಧೆಗೆ ಎಂಜಿಎo ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ್ ಅವರು ಚಾಲನೆಯನ್ನು ನೀಡಲಿದ್ದಾರೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ರಂಗಭೂಮಿಯ ಗೌರವಾಧ್ಯಕ್ಷರಾದ ಡಾ. ಎಚ್.ಎಸ್ ಬಲ್ಲಾಳ್ ಅವರು ವಹಿಸಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಅಂತ ಮಾಹಿತಿಯನ್ನ ನೀಡಿದ್ದಾರೆ.



