ಉಡುಪಿ:ರೆಸಾರ್ಟ್ ಕಂಪೌoಡ್ ನ ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು 3 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟುವಿನ ಪಡುಕೆರೆ ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ಕೋಟತಟ್ಟು ಪಡುಕೆರೆಯ, ಸುಧೀರ್ ಕೋಟ್ಯಾನ್ ಹಾಗೂ ಶಾರದಾ ಅವರ ಪುತ್ರ ಸುಶಾಂತ್ ಎಂದು ಗುರುತಿಸಲಾಗಿದೆ. ಬಾಲಕ ಕೋಟತಟ್ಟು ಪಡುಕೆರೆಯ ಬೀಚ್ ಸಮೀಪ ಇರುವ ರೆಸಾರ್ಟ್ ಎದುರಿನ ಗೇಟ್ ಬಳಿ, ನಿನ್ನೆ ಸಂಜೆ ಪಕ್ಕದ ಮನೆಯ ಹುಡುಗನ ಜೊತೆ ಆಟವಾಡುತ್ತಿದ್ದ ವೇಳೆ, ಆಕಸ್ಮಿಕವಾಗಿ ಮೈಮೇಲೆ ಸ್ಲೈಡಿಂಗ್ ಗೇಟ್ ಜಾರಿ ಬಿದ್ದಿದ್ದು, ಇದರಿಂದ ಸುಶಾಂತ್ ತಲೆಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕೋಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…