ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ಬೈಕ್- ಸ್ಕೂಟರ್ ಮಧ್ಯೆ ಭೀಕರ ಅಪಘಾತ; ಯುವತಿ ಸಾವು, ಮೂವರಿಗೆ ಗಾಯ

ಮಣಿಪಾಲ:ಬೈಕ್‌ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು,ಮೂವರು ಗಾಯಗೊಂಡ ಘಟನೆ ಮಣಿಪಾಲದ ರೋಯಲ್ ಅಂಬೆಸಿ ಅಪಾರ್ಟ್‌ಮೆಂಟ್ ಸಮೀಪ ನಡೆದಿದೆ.


ಮೃತರನ್ನು ಹಿರಿಯಡಕ ನಿವಾಸಿ ಸುಶ್ಮಿತಾ(19) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಹುಲ್, ಸ್ಕೂಟರ್ ಸವಾರರಾದ ಅನೂಜ್ ಮತ್ತು ಆದರ್ಶ ಎಂಬವರು ಗಾಯಗೊಂಡಿದ್ದಾರೆ. ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಕಾಯಿನ್ ಸರ್ಕಲ್ ನಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಹೋಗುತ್ತಿದ್ದಾಗ ಬೈಕಿಗೆ, ಅದೇ ದಿಕ್ಕಿನಲ್ಲಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ನಾಲ್ವರು ಸವಾರರು ಗಾಯಗೊಂಡರು. ಇವರಲ್ಲಿ ಗಂಭೀರವಾಗಿ ಗಾಯಗೊಂಡ ಸುಶ್ಮಿತಾ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!