ಮಣಿಪಾಲ:ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು,ಮೂವರು ಗಾಯಗೊಂಡ ಘಟನೆ ಮಣಿಪಾಲದ ರೋಯಲ್ ಅಂಬೆಸಿ ಅಪಾರ್ಟ್‌ಮೆಂಟ್ ಸಮೀಪ ನಡೆದಿದೆ.
ಮೃತರನ್ನು ಹಿರಿಯಡಕ ನಿವಾಸಿ ಸುಶ್ಮಿತಾ(19) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಹುಲ್, ಸ್ಕೂಟರ್ ಸವಾರರಾದ ಅನೂಜ್ ಮತ್ತು ಆದರ್ಶ ಎಂಬವರು ಗಾಯಗೊಂಡಿದ್ದಾರೆ. ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಕಾಯಿನ್ ಸರ್ಕಲ್ ನಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಹೋಗುತ್ತಿದ್ದಾಗ ಬೈಕಿಗೆ, ಅದೇ ದಿಕ್ಕಿನಲ್ಲಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ನಾಲ್ವರು ಸವಾರರು ಗಾಯಗೊಂಡರು. ಇವರಲ್ಲಿ ಗಂಭೀರವಾಗಿ ಗಾಯಗೊಂಡ ಸುಶ್ಮಿತಾ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…