ಉಡುಪಿ:ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಬೋಗಸ್ ಕಾರ್ಡ್ ಹೆಚ್ಚಾಗಿವೆ ಎಂಬ ನೆಪವೊಡ್ಡಿ ಶೇ.75-80 ರಷ್ಟು ಸ್ಕಾಲರ್ ಶಿಪ್ ಕಡಿತ ಮಾಡಿರುವುದು ಖಂಡನೀಯ. ಬಡ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಮೊತ್ತದಲ್ಲಿ ಕಡಿತಗೊಳಿಸದೆ, ಈ ಹಿಂದೆ ನೀಡಲಾಗುತ್ತಿದ್ದ ಮೊತ್ತವನ್ನೇ ನೀಡಲು ರಾಜ್ಯ ಸರಕಾರ ತಕ್ಷಣವೇ ಕ್ರಮಕೈಕೊಳ್ಳಬೇಕು ಎಂದು ಕಟ್ಟಡ ಕಾರ್ಮಿಕ ಸಂಘಗಳ ಕುಂದಾಪುರ ತಾಲೂಕು ಅಧ್ಯಕ್ಷ ಸುರೇಶ್ ಕಲ್ಲಾಗರ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1ರಿಂದ 4ನೇ ತರಗತಿಯ ಮಕ್ಕಳಿಗೆ ಹಿಂದೆ ಸಿಗುತ್ತಿದ್ದ 5 ಸಾವಿರ ರೂ. ಶೈಕ್ಷಣಿಕ ಧನಸಹಾಯವನ್ನು 1100 ರೂ. ಗೆ ಇಳಿಸಲಾಗಿದೆ. ಪ್ರೌಢಶಾಲೆ, ಪಿಯುಸಿ, ಪದವಿ, ಎಂಜಿನಿಯರಿoಗ್, ಡಿಪ್ಲೊಮಾ ಸಹಿತ ವಿವಿಧ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕಾರ್ಮಿಕರ ಮಕ್ಕಳ ಸ್ಕಾಲರ್‌ಶಿಪ್ ಮೊತ್ತವನ್ನು ಕಡಿತ ಮಾಡಲಾಗಿದೆ. ಬೋಗಸ್ ಕಾರ್ಡ್ ಹೆಚ್ಚಳ ಎಂಬ ಕಾರಣವೊಡ್ಡಿ ಈ ರೀತಿ ನಿರ್ಧಾರ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸಿಡಬ್ಲ್ಯುಎಫ್ ಐ ರಾಜ್ಯಾಧ್ಯಕ್ಷ ಬಾಲಕೃಷ್ಣ, ಸಮಿತಿಯ ಯು. ಶಿವಾನಂದ್, ಚಿಕ್ಕ ಮೊಗವೀರ, ಶಶಿಕಲಾ
ಉಪಸ್ಥಿತರಿದ್ರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…