ಬಂಟ್ವಾಳ:ಬಿಜೆಪಿ ವತಿಯಿಂದ ನಿಕಟಪೂರ್ವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನಾ ಕಾರ್ಯಕ್ರಮ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ನನ್ನನ್ನು ಪಕ್ಷಕ್ಕೆ ಎಳೆದುಕೊಂಡು ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದವರು ನಳಿನ್ ಕುಮಾರ್ ಎಂದು ಹೇಳಿದ್ದಾರೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದೇ ನಮ್ಮ ಧ್ಯೇಯವಾಗಿದೆ, ಅ ನಿಟ್ಟಿನಲ್ಲಿ ಮುಂದಿನ ಚುನಾವಣೆವರೆಗೆ ನಿರಂತರವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಅಂತ ಹೇಳಿದ್ರು. ಇನ್ನು ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ರವರು ರಾಜ್ಯದಲ್ಲಿ 28 ಸ್ಥಾನವನ್ನು ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಲು ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸಲು ಪ್ರಾಮಾಣಿಕವಾಗಿ ದುಡಿಯುತ್ತೇನೆ. ಅಧಿಕಾರ ಇರಲಿ, ಇಲ್ಲದಿರಲಿ ಕೊನೆಯ ದಿನದವರೆಗೆ ರಾಷ್ಟ್ರ ಕಾರ್ಯವನ್ನು ಮಾಡುತ್ತೇನೆ ಎಂದು ಸಂಕಲ್ಪ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಗೌರವಕ್ಕೆ ಚ್ಯುತಿ ಬರದಂತೆ, ಕಾರ್ಯಕರ್ತರ ಭಾವನೆಗಳಿಗೆ ಪೂರಕವಾದ ರೀತಿಯಲ್ಲಿ ರಾಜಕೀಯ ಮಾಡುತ್ತೇನೆ ಅಂತ ಹೇಳಿದ್ದಾರೆ. ಇನ್ನು ಈ ಸಂದರ್ಭ ವೇದಿಕೆಯಲ್ಲಿ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ಸಂತೋಷ್ ಕುಮಾರ್ ರೈ ಬೋಳಿಯಾರು, ಬಂಟ್ವಾಳ ಬಿಜೆಪಿ ಕಾರ್ಯದರ್ಶಿ ಡೊಂಬಯ್ಯ ಅರಳ, ಹರಿಕೃಷ್ಣ ಬಂಟ್ವಾಳ, ರಾಮ್ ದಾಸ ಬಂಟ್ವಾಳ, ಕಸ್ತೂರಿ ಪಂಜ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…