ಮoಗಳೂರು:ಲಾಡ್ಜ್ ನ ರೂಮ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಗದರ ಬೆಂದೂರ್‌ವೆಲ್ ನ ರೆಸಿಡೆಂಟ್ ಗೇಟ್ ಲಾಡ್ಜ್ ನಲ್ಲಿ ನಡೆದಿದೆ.

ಮೃತರನ್ನ ಯಶ್ರಾಜ್ ಎಸ್.ಸುವರ್ಣ ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಬಳಿಕ ಸುಮಾರು12:35 ಕ್ಕೆ ಲಾಡ್ಜ್ ನಲ್ಲಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿದ್ದರು. ಯಶ್ರಾಜ್ ಇದ್ದ ಕೋಣೆಯಿಂದ ಹೊಗೆ ಬರುತ್ತಿದ್ದನ್ನ ಗಮನಿಸಿದ ಲಾಡ್ಜ್ ಸಿಬ್ಬಂದಿ ಬಾಗಿಲು ತೆರೆದಾಗ ಬೆಂಕಿ ಆವರಿಸಿತ್ತು. ತಕ್ಷಣವೇ ಅಗ್ನಿಶಾಮಕದವರಿಗೆ ತಿಳಿಸಿದ್ದಾರೆ ಎನ್ನಲಾಗಿದ್ದು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಬೆಂಕಿ ನಂದಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಯುತ್ತಿದೆ. ಇನ್ನು ಬಿಕರ್ನಕಟ್ಟೆಯ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದ ಮೃತ ಯಶ್ರಾಜ್ ರವರು ನವೆಂಬರ್ 15 ರಿಂದ ಲಾಡ್ಜ್ನಲ್ಲಿ ವಾಸವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ.



