ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ- ವ್ಯಕ್ತಿ ಸಾವು

ಮoಗಳೂರು:ಲಾಡ್ಜ್ ನ ರೂಮ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಗದರ ಬೆಂದೂರ್‌ವೆಲ್ ನ ರೆಸಿಡೆಂಟ್ ಗೇಟ್ ಲಾಡ್ಜ್ ನಲ್ಲಿ ನಡೆದಿದೆ.

ಮೃತರನ್ನ ಯಶ್ರಾಜ್ ಎಸ್.ಸುವರ್ಣ ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಬಳಿಕ ಸುಮಾರು12:35 ಕ್ಕೆ ಲಾಡ್ಜ್ ನಲ್ಲಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿದ್ದರು. ಯಶ್ರಾಜ್ ಇದ್ದ ಕೋಣೆಯಿಂದ ಹೊಗೆ ಬರುತ್ತಿದ್ದನ್ನ ಗಮನಿಸಿದ ಲಾಡ್ಜ್ ಸಿಬ್ಬಂದಿ ಬಾಗಿಲು ತೆರೆದಾಗ ಬೆಂಕಿ ಆವರಿಸಿತ್ತು. ತಕ್ಷಣವೇ ಅಗ್ನಿಶಾಮಕದವರಿಗೆ ತಿಳಿಸಿದ್ದಾರೆ ಎನ್ನಲಾಗಿದ್ದು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಬೆಂಕಿ ನಂದಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಯುತ್ತಿದೆ. ಇನ್ನು ಬಿಕರ್ನಕಟ್ಟೆಯ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದ ಮೃತ ಯಶ್ರಾಜ್ ರವರು ನವೆಂಬರ್ 15 ರಿಂದ ಲಾಡ್ಜ್ನಲ್ಲಿ ವಾಸವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!