ಮೂಡುಬಿದಿರೆ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಸಂಸ್ಥೆ (ರಿ.) ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಫ್‌ನ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಎಲ್ಲಾ ಆರು ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಆಳ್ವಾಸ್ ಪಡೆದುಕೊಂಡಿತು.
ಪುರುಷರ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಹಾಗೂ ಮಹಿಳಾ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದಿದೆ.
ಪುರುಷರ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಜೂನಿಯರ್ ವಿಭಾಗದಲ್ಲಿ ಆಳ್ವಾಸ್‌ನ ಶಿವಾನಂದ ಪಡೆದುಕೊಂಡರು. ಮಹಿಳಾ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಯೂತ್ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಪಡೆದುಕೊಂಡರು. ಕ್ರೀಡಾಪಟುಗಳ ಉತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅಭಿನಂದಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…