ಜನ ಮನದ ನಾಡಿ ಮಿಡಿತ

Advertisement

ಇಂಡೋನೇಷ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಯುವಕ ಆಯ್ಕೆ

ಪುಂಜಾಲಕಟ್ಟೆ ನ.23: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.


ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದಲ್ಲಿ ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ .

ಧನೇಶ್ ಅವರು ವಾಮದಪದವು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ, ಬಂಟ್ವಾಳ ಎಸ್‌ವಿಎಸ್ ಪ.ಪೂ.ಕಾಲೇಜಿನಲ್ಲಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ ಪಡೆದು ಮೂಡುಬಿದಿರೆ ಮಹಾವೀರ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಹಾಗೂ ಬೆಂಗಳೂರುನಲ್ಲಿ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ. ಶಾಲಾ, ಕಾಲೇಜು ದಿನಗಳಲ್ಲಿ ಕ್ರಿಕೇಟ್ ಆಸಕ್ತಿ ಬೆಳೆಸಿಕೊಂಡು ಆಡುತ್ತಿದ್ದು, ಉತ್ತಮ ಬ್ಯಾಟ್ಸ್‌ಮನ್ ಅಗಿರುವ ಅವರು ಇದೀಗ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!