ಪುಂಜಾಲಕಟ್ಟೆ ನ.23: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದಲ್ಲಿ ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ .
ಧನೇಶ್ ಅವರು ವಾಮದಪದವು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ, ಬಂಟ್ವಾಳ ಎಸ್‌ವಿಎಸ್ ಪ.ಪೂ.ಕಾಲೇಜಿನಲ್ಲಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ ಪಡೆದು ಮೂಡುಬಿದಿರೆ ಮಹಾವೀರ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಹಾಗೂ ಬೆಂಗಳೂರುನಲ್ಲಿ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ. ಶಾಲಾ, ಕಾಲೇಜು ದಿನಗಳಲ್ಲಿ ಕ್ರಿಕೇಟ್ ಆಸಕ್ತಿ ಬೆಳೆಸಿಕೊಂಡು ಆಡುತ್ತಿದ್ದು, ಉತ್ತಮ ಬ್ಯಾಟ್ಸ್‌ಮನ್ ಅಗಿರುವ ಅವರು ಇದೀಗ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…