ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಬಪ್ಪನಾಡು ಕ್ಷೇತ್ರದ ಅಭಿವೃದ್ಧಿಗೆ ದಿ. ನಾರಾಯಣ ಶೆಟ್ಟರ ಕೊಡುಗೆ ಅಪಾರ -ದುಗ್ಗಣ್ಣ ಸಾವಂತರು

ಮುಲ್ಕಿ: ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿ. ಎಂ ನಾರಾಯಣ ಶೆಟ್ಟರಿಗೆ ಶೃದ್ದಾಂಜಲಿ ಸಭೆ ಬಪ್ಪನಾಡು ದೇವಸ್ಥಾನದ ಜ್ಞಾನ ಮಂದಿರದಲ್ಲಿ ನಡೆಯಿತು.


ಸಭೆಯಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹಾಗೂ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಮಾತನಾಡಿ ಬಪ್ಪನಾಡು ದೇವಸ್ಥಾನದ ಅಭಿವೃದ್ಧಿಯ ಹರಿಕಾರ ದಿ. ನಾರಾಯಣ ಶೆಟ್ಟರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅಪಾರ ಭಕ್ತಿ ಹಾಗೂ ಗೌರವವಿದ್ದು ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿತ್ತು ಎಂದರು. ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ ಮಾತನಾಡಿ ಶ್ರೀ ಕ್ಷೇತ್ರ ಬಪ್ಪನಾಡಿಗೆ ಚಿನ್ನದ ಪಲ್ಲಕ್ಕಿ ಸಹಿತ ಅನೇಕ ಅಭಿವೃದ್ಧಿ ಕಾರ್ಯಗಳು ಬಹಳಷ್ಟು ಶ್ರಮಿಸಿದ್ದರು ಎಂದರು.


ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ ದೇವಸ್ಥಾನದ ಪ್ರತಿಯೊಂದು ಅಭಿವೃದ್ಧಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕೊಡುಗೈದಾನಿಯಾಗಿದ್ದರು.
ಉದ್ಯಮಿ ಅರವಿಂದ ಪೂಂಜ ಮಾತನಾಡಿ ದಿ.ಶೆಟ್ಟರು ಹಿರಿಯರಿಗೆ ಆದರ್ಶಪ್ರಾಯರಾಗಿ ಯುವಕರಿಗೆ ಮಾದರಿಯಾಗಿದ್ದರು ಎಂದರು.
ಅಭಿವೃದ್ಧಿ ಸಮಿತಿಯ ಸುನಿಲ್ ಆಳ್ವ ಮಾತನಾಡಿ ಮುಲ್ಕಿ ಪರಿಸರದಲ್ಲಿ ಪ್ರತಿಯೊಂದು ಸಂಸ್ಥೆಗೂ ಪ್ರೇರಣಾ ಶಕ್ತಿಯಾಗಿದ್ದರು, ಊರಿನ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದ್ದು ಅವರ ಕನಸನ್ನು ನನಸು ಮಾಡಲು ಪ್ರಯತ್ನಿಸೋಣ ಎಂದರು.

ಮುಲ್ಕಿ ಬಂಟರ ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ದೆ ಮಾತನಾಡಿ ದಿ.ನಾರಾಯಣ ಶೆಟ್ಟರು ವ್ಯಕ್ತಿಯಲ್ಲ ಶಕ್ತಿಯಾಗಿದ್ದರು, ದೇವಸ್ಥಾನದ ಅಭಿವೃದ್ಧಿ ಸಹಿತ ಪ್ರತಿಯೊಂದು ಕಾರ್ಯಗಳಲ್ಲಿ ಬೆನ್ನೆಲುಬಾಗಿದ್ದರು ಎಂದರು.
ಶೃದ್ಧಾಂಜಲಿ ಸಭೆಯಲ್ಲಿ ಡಾ. ಹರಿಶ್ಚಂದ್ರ ಸಾಲ್ಯಾನ್, ಸೂರ್ಯ ಕುಮಾರ್ ಹಳೆಯಂಗಡಿ,
ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಸಂಜೀವ ದೇವಾಡಿಗ ಬಪ್ಪನಾಡು,ವೆಂಕಟೇಶ್ ಹೆಬ್ಬಾರ್, ಮುರಳಿಧರ ಭಂಡಾರಿ ಕುಬೆವೂರು ಕಮಲಾಕ್ಷ ಬಡಗಿತ್ಲು, ವಾಸು ಪೂಜಾರಿ ಚಿತ್ರಾಪು, ರಂಗನಾಥ ಶೆಟ್ಟಿ, ಸುಜಿತ್ ಸಾಲ್ಯಾನ್, ಕಿಶೋರ್ ಶೆಟ್ಟಿ ಬಪ್ಪನಾಡು, ಗಂಗಾಧರ ಶೆಟ್ಟಿ ಬರ್ಕೆ ತೋಟ, ಚಂದ್ರಶೇಖರ ಸುವರ್ಣ, ನಾಗೇಶ್ ಬಪ್ಪನಾಡು, ಮಹೀಮ್ ಹೆಗ್ಡೆ,ಮುಲ್ಕಿ ನಗರ ಪಂಚಾಯತ್ ಮಾಜೀ ಅಧ್ಯಕ್ಷ ಸುಭಾಷ್ ಶೆಟ್ಟಿ, ಸದಸ್ಯರಾದ ಸತೀಶ್ ಅಂಚನ್ ,ಹರ್ಷರಾಜ ಶೆಟ್ಟಿ, ದಯಾವತಿ ಅಂಚನ್, ಉದಯ್ ಕುಮಾರ್ ಶೆಟ್ಟಿ ಅಧಿಧನ್, ಉದ್ಯಮಿ ಜೀವನ್ ಶೆಟ್ಟಿ ಕಾರ್ನಾಡ್, ದಿನೇಶ್ ಕೋಲ್ನಾಡ್, ಶಿವಶಂಕರ್ ವರ್ಮ ಮತ್ತಿತರರು ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ಸಾಯಿನಾಥ ಶೆಟ್ಟಿ ನಿರೂಪಿಸಿದರು
ಬಳಿಕ ದಿವಂಗತ ನಾರಾಯಣ ಶೆಟ್ಟರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!