ನೆನೆಗುದಿಗೆ ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಯನ್ನು ಶೀಘ್ರವೇ ಪುನರಾಂಭಿಸುವಂತೆ ಮಂಗಳೂರಿಗೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎಸ್. ಸುರೇಶ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮನವಿ ಮಾಡಿದರು.
ಸುರತ್ಕಲ್ ಮಾರುಕಟ್ಟೆ ಸಂಕೀರ್ಣ ಕಾಮಗಾರಿಗೆ 2013ರ ಸನ್ಮಾನ್ಯ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಅವಧಿಯಲ್ಲಿ ಅನುದಾನ ಮಂಜೂರುಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ನಂತರ ಕಾಮಗಾರಿಯು ಕುಂಟುತ್ತಾ ಸಾಗಿ ಅರ್ಧದಲ್ಲಿ ನಿಂತಿದೆ. ಕಾಮಗಾರಿ ವಿಳಂಬ ನೀತಿಯಿಂದಾಗಿ ಸುರತ್ಕಲ್ ಪ್ರದೇಶದ ಜನತೆಗೆ ಸರಿಯಾದ ಮಾರುಕಟ್ಟೆಯಿಲ್ಲದೇ ಸ್ಥಳೀಯರು ಹಾಗೂ ಮಧ್ಯಮ ಮತ್ತು ಬಡ ವರ್ಗದ ವ್ಯಾಪಾರಸ್ಥರು ತೊಂದರೆಗೊಳಗಾಗಿರುತ್ತಾರೆ ಎಂದು ಇನಾಯತ್ ಅಲಿ ತಮ್ಮ ಮನವಿಯಲ್ಲಿ ಸಚಿವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಪೋರೇಟರ್‌ಗಳಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜಾ, ಅನಿಲ್ ಕುಮಾರ್, ಮುಖಂಡರಾದ ಭಾಸ್ಕರ್ ಮೊಯಿಲಿ, ಪ್ರತಿಭಾ ಕುಳಾಯಿ, ಗಿರೀಶ್ ಆಳ್ವ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…