ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 2023-24ನೇ ಸಾಲಿನ ಮಕ್ಕಳ ಹಕ್ಕು ವಿಶೇಷ ಗ್ರಾಮ ಸಭೆ ಶುಕ್ರವಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಪಡುಪಣಂಬೂರು ಶಾಲಾ ವಿದ್ಯಾರ್ಥಿ ನಾಯಕಿ ಪೂರ್ಣಿಮಾ ವಹಿಸಿದ್ದರು.
ಸಭೆಯಲ್ಲಿ ಮಕ್ಕಳ ಹಕ್ಕುಗಳು ಮಾಸೋತ್ಸವ ಸಮಿತಿಯ ದ.ಕ.ಜಿಲ್ಲಾ ಸಂಚಾಲಕಿ ನಂದ ಪಾಯಸ್ ಮಾತನಾಡಿ ಮಕ್ಕಳ ಮೇಲಿನ ದೌರ್ಜನ್ಯ , ಬಾಲ್ಯ ವಿವಾಹ ಬಾಲ್ಯ ಕಾರ್ಮಿಕತೆ, ತಡೆಗಟ್ಟುವುದೇ ಅಲ್ಲದೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕು ಎಂದರು.
ಸಿ.ಆರ್. ಪಿ. ಜ್ಯೋತಿ ಮಾತನಾಡಿ ಮಕ್ಕಳು ಮೊಬೈಲ್ ಬದಿಗಿಡಿ ಶಿಕ್ಷಣಕ್ಕೆ ಒತ್ತು ನೀಡಿ ಎಂದರು. ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್ ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯರಾದ ವಿನೋದ್ ಸಾಲ್ಯಾನ್,ಅಭಿವೃದ್ದಿ ಅಧಿಕಾರಿ ಸುಧೀರ್, ಕಾರ್ಯದರ್ಶಿ ಸುಜಾತ ಎಸ್, ಅಂಗನವಾಡಿ ಸೂಪರ್ವೈಸರ್ ಸುಲೋಚನ, ಆರೋಗ್ಯ ಇಲಾಖೆಯ ಮಾರ್ಗರೇಟ್ ಸುದರ್ಶಿನಿ ಮತ್ತಿತರರು ಉಪಸ್ಥಿತರಿದ್ದು ಮಕ್ಕಳ ಸಮಸ್ಯೆಗಳ ಪ್ರಶ್ನೆಗಳಿಗೆ ಉತ್ತರಿಸಿದರು. ರಾಮಣ್ಣ ಶೆಟ್ಟಿ ಶಾಲೆಯ ಕುಮಾರಿ ಸಾನ್ವಿ ಸ್ವಾಗತಿಸಿದರು, ಕೆರೆಕಾಡು ಶಾಲೆಯ ರಂಜಿತ್ ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…