ಜನ ಮನದ ನಾಡಿ ಮಿಡಿತ

Advertisement

ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ..!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಗ್ರರ ದಾಳಿಯಿಂದ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನುಡಿನಮನ ಸಲ್ಲಿಸಿದ್ದಾರೆ.

ಇದೇ ವೇಳೆ ಪ್ರಾಂಜಲ್ ಕುಟುಂಬಕ್ಕೆ ಮುಖ್ಯಮಂತ್ರಿಯವರು 50 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ರು. ನವೆಂಬರ್ 22 ರಂದು ಕಾಶ್ಮೀರದ ರಜೌರಿಯ ಕಾವಿಕೋಟ್ ಎಂಬಲ್ಲಿ ಇಬ್ಬರು ಉಗ್ರರು ಅಡಗಿದ್ದು, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊoದಿಗೆ ಕಾರ್ಯಾಚರಣೆ ನಡೆಸಿದ್ರು.

ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆದಿದ್ದು, ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಸಂದರ್ಭ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾಗಿದ್ದಾರೆ. ಆದರೆ ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದ್ದಾರೆ. ಹಾಗಾಗಿ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಅಂತ ಭರವಸೆಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!