ಕುಣಿಗಲ್ : ಬೋರ್ ವೆಲ್ ಹಾಗೂ ಕಾರು ನಡುವೆ ಭೀಕರ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ.
ಮಂಗಳೂರಿನ ಬಜಪೆ ಮೂಲದ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಮೃತ ದುರ್ಧೈವಿಗಳು ಎಂದು ತಿಳಿದು ಬಂದಿದ್ದು ಇನ್ನು ನಿತೀಶ್ ಭಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ತಮ್ಮ ಊರಿಗೆ ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…