ಮಂಗಳೂರು:ರoಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್(ರಿ.) ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ನಡೆಯಲಿದೆ.

ಇದೇ ಬರುವ ಡಿಸೆಂಬರ್ 03 ರಂದು ರಂಗಚಾವಡಿ ಪ್ರಶಸ್ತಿ-2023 ಪ್ರದಾನ ಸಮಾರಂಭವು ಬಂಟರ ಭವನ ಸುರತ್ಕಲ್‌ನಲ್ಲಿ ಆಯೋಜನೆಗೊಂಡಿದ್ದು, ಕಾರ್ಯಕ್ರಮವನ್ನು ಹೇರಂಭ ಇಂಡಸ್ಟಿçÃಸ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕನ್ಯಾನ ಸದಾಶಿವ ಶೆಟ್ಟಿಯವರು ರಂಗ ಜ್ಯೋತಿ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಲಿದ್ದಾರೆ. ಇದೇ ಸಂದರ್ಭ ಖ್ಯಾತ ನಾಟಕ ರಚನೆಕಾರ, ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರಿಗೆ ರಂಗಚಾವಡಿ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಬಳಿಕ ಮೈತಿದಿ ತುಳುನಾಟಕ ಪ್ರದರ್ಶಗೊಳ್ಳಲಿದೆ.



