ಬಂಟ್ವಾಳ:ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆಯೊಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ರವರ ಮಗಳು ಆಯಿಸತ್ ರಸ್ಮಾ ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ ಕಾಣೆಯಾದವರು ಎಂದು ತಿಳಿದು ಬಂದಿದೆ . ದೇರಳಕಟ್ಟೆಯ ಕಾಲೇಜೊಂದರಲ್ಲಿ ಫಾರ್ಮಸಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಒಂದು ವಾರಗಳ ಕಾಲ ರಜೆಯಿದ್ದ ಕಾರಣ ಯುವತಿ ಮನೆಯಲ್ಲಿ ಇದ್ದರು ಎನ್ನಲಾಗಿದೆ. ನ.23ರ ರಾತ್ರಿ ಮನೆಯವರ ಜೊತೆ ಮಲಗಿದ್ದ ಯುವತಿ ಬೆಳಿಗ್ಗೆ ಎದ್ದು ನೋಡಿದಾಗ ಮಲಗಿದ್ದ ಕೋಣೆಯಲ್ಲಿರದೆ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನು ಕಾಣೆಯಾದ ಯುವಕ ಸಿನಾನ್ ಕೆಲ ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ಮಾಡಿ ಕೊಂಡಿದ್ದ. ಇತ್ತೀಚೆಗೆ ಮರಳಿ ಊರಿಗೆ ಬಂದಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈತ ಕೂಡ ನ.22. ರಂದು ಮನೆಯವರ ಜೊತೆಗೆ ಮಲಗಿದ್ದು, ನ.23.ರಂದು ಬೆಳಿಗ್ಗೆ ಎದ್ದು ನೋಡುವಾಗ ಕಾಣೆಯಾಗಿದ್ದಾನೆ. ಇನ್ನು ಅಕ್ಕಪಕ್ಕದ ಮನೆಯ ಹುಡುಗಿ ಮತ್ತು ಹುಡುಗನ ನಡುವೆ ಪ್ರೇಮ ಪ್ರಣಯದ ಶಂಕೆಯನ್ನು ವ್ಯಕ್ತಪಡಿಸಲಾಗಿದೆ. ಇವರಿಬ್ಬರು ಸಲುಗೆಯಿಂದ ಇದ್ದುದಲ್ಲದೆ, ಪರಿಚಯಸ್ಥರಾಗಿದ್ದಾರೆ. ಹಾಗಾಗಿ ಇವರಿಬ್ಬರು ಒಂದೇ ದಿನ ಕಾಣೆಯಾಗಿರುವುದರ ಹಿಂದೆ ಸಂದೇಹ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…