ಉಡುಪಿ:ಕಾರೊಂದರಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ನಾಲ್ವರು ಗಾಂಜಾ ಪೆಡ್ಲರ್ ಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಶೀಂಬ್ರಾ ಬ್ರಿಡ್ಜ್ ಬಳಿ ನಡೆದಿದೆ.

ಬಂಧಿತರಿoದ 274 ಗ್ರಾಂ ತೂಕದ ಗಾಂಜಾ ಹಾಗೂ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಲತೀಫ್, ಮುಸ್ತಾಫ್ ಹಂಜಾ, ಮೊಹಮ್ಮದ್ ಅಶ್ಪಕ ಹಾಗೂ ಶಕಿಲೇಶ ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ನಾಲ್ವರು ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿoದ 274 ಗ್ರಾಂ ತೂಕದ ಗಾಂಜಾ, 5 ಲಕ್ಷ ಮೌಲ್ಯದ ಕಾರು, 19,130 ರೂ. ನಗದು, 20 ಸಾವಿರ ಮೌಲ್ಯದ 5 ಮೊಬೈಲ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲದಲ್ಲಿ ಮಾರಾಟ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಗಾಂಜಾವನ್ನು ಶೇಖರಣೆ ಮಾಡಿಟ್ಟಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ನಾಲ್ವರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಣಿಪಾಲದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವ ಜಾಲದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನು ಪೆಡ್ಲರ್ ಗಳು ಮಣಿಪಾಲದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊAಡು ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದ್ದು, ಹಲವಾರು ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿರುವುದು ಹಾಗೂ ಸೇವನೆ ಮಾಡಿರುವುದು ತಿಳಿದುಬಂದಿದೆ.



