ಕಿನ್ನಿಗೋಳಿ ಸ್ವಾ ಮಿ ವಿವೇಕಾನಂದ ಸೇವಾಸಂಸ್ಥೆಯು ಕಳೆದ 10 ವರ್ಷದಿಂದ ಸಾಂಸ್ಕೃತಿಕ ಸಾಹಿತ್ಯಿಕ, ಅದ್ಯಾತ್ಮಿಕ ಧಾರ್ಮಿಕ , ಕ್ರೀಡಾ ಮತ್ತು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು ಇದೀಗ ಪ್ರತಿ ಗ್ರಾಮದಲ್ಲಿಯೂ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸೇವಾ ಘಟಕಗಳನ್ನು ಆರಂಭಿಸಲಾಗುವುದು ಎಂದು ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಡಾ| ಜಗನ್ನಾಥ ಶೆಟ್ಟಿ ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಜರಗಿದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾಮಿ ವಿವೇಕಾವಾಣಿಯಂತೆ ಮಾನವನ ಸೇವೆಯು ಮಾಧವ ಸೇವೆ ಯ ಪರಿಕಲ್ಪನೆಯಲ್ಲಿ ಪ್ರತಿ ಗ್ರಾಮ ಮಟ್ಟದಲ್ಲಿ ಧಾರ್ಮಿಕತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಸತ್ಯನಾರಾಯಣ ಪೂಜೆ, ಶನಿ ಪೂಜೆ , ಹರಿಕಥೆ ಮಾಡಲಾಗುವುದು. ಸೇವಾ ಕಾರ್ಯಕ್ರಮಕ್ಕೆ ಗಟ್ಟಿ ಮಾಡಲು ವೈದ್ಯಕೀಯ ಶಿಬಿರ, ಸಮಾಜ ಮುಖಿ ಕಾರ್ಯಕ್ರಮ ಬಲ ಪಡಿಸಲು ಕೃಷಿ ಕಾರ್ಯಕ್ಕೆ ಸಲಹೆ ಮಾಹಿತಿ ಶಿಬಿರ ಅಗತ್ಯ ತುರ್ತು ಸೇವೆ ನೀಡುವ ಬಗ್ಗೆ ಇನ್ನಿತರ ಸೇವಾ ಕಾರ್ಯಕ್ರಮ ಮಾಡುವ ನಿಟ್ಟಿನಲ್ಲಿ ಗ್ರಾಮ ದಲ್ಲಿ ೩೦ ಜನರ ಸದೃಡ ತಂಡ ಕಟ್ಟಲಾಗುವುದು, ವಾರದ ಸಭೆ , ತಿಂಗಳ ಸಭೆ ಮುಂತಾದ ಪರಿಕಲ್ಪನೆ ಮಾಡಲಾಗುವುದು ಎಂದು ತಿಳಿಸಿದರು. ಸಂಚಾಲಕ ನರಸಿಂಹ ಮಡಿವಾಳ , ಪದ್ಮಿನಿ ವಸಂತ್, ಪ್ರಕಾಶ್ ಆಚಾರ್, ಸಂತೋಷ್ ದೇವಾಡಿಗ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಸೀತಾರಾಮ ಶೆಟ್ಟಿ ಪ್ರಸ್ತಾವನೆಗೈದು,ಕಾರ್ಯಕ್ರಮ ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…