ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆ ಪ್ರತಿ ಮನೆಯ ಗೃಹಿಣಿಗಳಿಗೆ ತಲುಪುತ್ತಿದೆ. ಅದರಂತೆಯೇ ಇದೀಗ ನಾಡದೇವತೆ ತಾಯಿ ಚಾಮುಂಡೇಶ್ವರಿಗೂ ಈ ಭಾಗ್ಯವನ್ನು ಸರ್ಕಾರ ಒದಗಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಪ್ರತಿ ತಿಂಗಳು 2 ಸಾವಿರ ರೂಪಾಯಿಯನ್ನು ನೀಡಬೇಕು ಎಂದು ವ್ಯಕ್ತಿಯೊಬ್ಬರು ಸರ್ಕಾರಕ್ಕೆ ಪತ್ರ ಬರೆದಿದ್ದರು.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಎಂಬವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಪತ್ರ ಬರೆದಿದ್ದರು. ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ಮಾಡಬೇಕಾಗಿ ಕೇಳಿಕೊಂಡಿದ್ದರು. ಹಾಗಾಗಿ ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ.
ಇದೀಗ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಿದ್ದಾರೆ. 1,18,000 ರೂಪಾಯಿ ಹಣವನ್ನ ದೇಗುಲಕ್ಕೆ ನೀಡಲು ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ.
ಸರ್ಕಾರವು ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯವಾಗಲಿದ್ದು, ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯವಾಗಲಿದೆ.
ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಲು ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ



