ಆರು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ-ಮಂಡಳಿ ಪಟ್ಟಿ ಇವತ್ತು ಫೈನಲ್ ಆಗುವ ಸಾಧ್ಯತೆ ಇದೆ. ಈ ಸಂಬಂಧ ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸ್ತಿದ್ದಾರೆ.
ನಿಗಮ, ಮಂಡಳಿ ಪಟ್ಟಿ ಅಂತಿಮಗೊಳಿಸುವ ಸಂಬಂಧ ಮಧ್ಯಾಹ್ನ 2 ಗಂಟೆಗೆ ಸಿಎಂ, ಡಿಸಿಎಂ ಜೊತೆ ಸಭೆ ನಡೆಯಲಿದೆ. ಶಾಸಕರ ಜೊತೆ 10 ರಿಂದ 15 ಕಾರ್ಯಕರ್ತರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಕುರಿತು ಇಂದು ತೀರ್ಮಾನವಾಗಲಿದೆ. ಈ ಹಿಂದೆ ಶಾಸಕರ ಜೊತೆಗೆ ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದರು.
ಮೊದಲ ಹಂತವಾಗಿ ಅಧಿವೇಶನಕ್ಕೂ ಮೊದಲೇ 20 ಶಾಸಕರು, 4 ಪರಿಷತ್ ಸದಸ್ಯರಿಗೆ ಹಂಚಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಅಧಿವೇಶನ ಆರಂಭಕ್ಕೂ ಮೊದಲೇ ಶಾಸಕರಿಗೆ ನಿಗಮ, ಮಂಡಳಿ ಹಂಚಿಕೆಗೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಂದು ನಡೆಯುವ ಅಂತಿಮ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…