ಪುತ್ತೂರು:ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ತಾನು, ಕೊಟ್ಟಿರುವ ಜವಾಬ್ದಾರಿಯಲ್ಲಿ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳುವುದಿಲ್ಲ, ಬದಲಾಗಿ ಆದರ್ಶವಾಗಿ, ಯಾವುದೇ ಚ್ಯುತಿ ಬಾರದಂತೆ, ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ ಎಂದು ಬಿಜೆಪಿ ನಿಕಪಟೂರ್ವ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.


ಪುತ್ತೂರಿನ ರೋಟರಿ ಸಭಾಭವನದಲ್ಲಿ ನಡೆದ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ನಗರ ಮತ್ತು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡ್ತಾ, ಜನರ ಆಶೀರ್ವಾದ ಮತ್ತು ಪ್ರೀತಿಯಿಂದ 3 ಬಾರಿ ಸಂಸದನಾಗಿ, ರಾಜ್ಯಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜ್ಯಾಧ್ಯಕ್ಷ ಸ್ಥಾನ ನೀಡಿದಾಗ ನೀನು ಮಾಸ್ ಲೀಡರ್ ಆಗಲು ಈ ಅವಕಾಶವಲ್ಲ, ಪಕ್ಷವನ್ನು ಮಾಸ್ ಆಗಿಸಬೇಕು ಎಂದು ಪಕ್ಷ ತಿಳಿಸಿತ್ತು. ಅದರಂತೆ 18 ಬಾರಿ ರಾಜ್ಯ ಪ್ರವಾಸ ಮಾಡಿದ್ದೇನೆ. ಪಂಚಾಯತ್ ಚುನಾವಣೆಯಿಂದ ಎಲ್ಲಾ ಚುನಾವಣೆಗಳಲ್ಲೂ ಅತಿಹೆಚ್ಚು ಗೆಲುವು ಬಿಜೆಪಿ ಪಕ್ಷದ್ದಾಗಿದೆ ಅಂತ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಹಲವರು ಉಪಸ್ಥಿತರಿದ್ದರು.



