ದ. ಕ. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ.
ಬಂಟ್ವಾಳ ತಾಲೂಕಿನ ದ.ಕ.ಜಿ.ಪ ಸರಕಾರಿ ಪ್ರಾಥಮಿಕ ಶಾಲೆ, ಕೊಡಂಗೆ ಇಲ್ಲಿ ಜರಗಿತು . ತಾಲೂಕು ಆರೋಗ್ಯಾಧಿಕಾರಿ ಡಾಕ್ಟರ್ ಅಶೋಕ್ ರೈ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ವಿವರವಾಗಿ ಮಕ್ಕಳಿಗೆ ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಶೃತಿ ತಂಬಾಕು ವ್ಯಸನಿಗಳು ಆಗುವುದಿಲ್ಲ ಮತ್ತು ನಮ್ಮ ಕುಟುಂಬ ವರ್ಗದವರನ್ನು ಹಾಗೂ ಸ್ನೇಹಿತರನ್ನು ಈ ದುಶ್ಚಟದಿಂದ ಹೊರ ತರಲು ಪ್ರಯತ್ನ ಮಾಡುತ್ತೇವೆ ಎಂಬ ಬಗ್ಗೆ ಮಕ್ಕಳಿಗೆ ಪ್ರತಿಜ್ಞೆ ಮಾಡಿಸಿದರು. ಈ ಸಂದರ್ಭದಲ್ಲಿ ತಂಬಾಕು ದುಷ್ಪಟದ ಅರಿವು ಮೂಡಿಸಲು ಜಾತ ನಡೆಸಲಾಯಿತು ಹಾಗೂ ಸುತ್ತಮುತ್ತಲಿನ ಅಂಗಡಿಗಳಿಗೆ ತೆರಲಿ ಗುಲಾಬಿ ಹೂ ನೀಡಿ ತಂಬಾಕು ವಸ್ತುಗಳನ್ನು ಮಾರಾಟ ಮಾಡದಂತೆ ಅಂಗಡಿ ಮಾಲಕರಿಗೆ ಮನವರಿಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಧ, ಆರೋಗ್ಯ ನಿರೀಕ್ಷಣಾಧಿಕಾರಿ ರಾಕೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸೌಮ್ಯ, ಆಶಾ ಕಾರ್ಯಕರ್ತೆ ಸರಸ್ವತಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ ಸುಜಾತ,ಶಾಲಾ ಮುಖ್ಯ ಶಿಕ್ಷಕಿ ಸುಗುಣ ಮತ್ತು ಎಲ್ಲಾ ಶಿಕ್ಷಕರು, ಶಾಲಾಭಿವೃದ್ಧಿ ಸದಸ್ಯರಾದ ಅಬ್ದುಲ್ ಜಲೀಲ್ ಭಾಗವಹಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…