ಕುoದಾಪುರ:ಶಂಕರನಾರಾಯಣ ಗ್ರಾಮ ಪಂಚಾಯತ್ ಎದುರಿನ ಗೋಳಿಕಟ್ಟೆ ಗುಡ್ಡೆಯ ಮೇಲಿರುವ BSNL ಮೈಕ್ರೋ ಟವರ್ ಕಟ್ಟಡದ ಒಳಗೆ ಅಳವಡಿಸಲಾದ ಬ್ಯಾಟರಿಗಳನ್ನು ಕಳವು ಮಾಡಲಾಗಿದೆ

.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬOದಿಸಿದOತೆ ಶಂಕರನಾರಾಯಣ ಪಿ.ಎಸ್.ಐ ನಾಸೀರ್ ಹುಸೇನ್ ಹಾಗೂ ಸಿಬ್ಬಂದಿಯರು ಶಂಕರನಾರಾಯಣ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಆರೋಪಿಗಳಾದ ಕೃಷ್ಣ, ಬದ್ರುರುದ್ದೀನ್, ಉಸ್ಮಾನ್, ಎಂಬುವರನ್ನು ಬಂಧಿಸಿದ್ದಾರೆ.


ಬಂಧಿತರಿOದ ಬ್ಯಾಟರಿ ಹಾಗೂ ಕಳ್ಳತನಕ್ಕೆ ಬಳಸಿದ ಪಿಕಪ್ ವಾಹನ ಸಮೇತ ಸುಮಾರು 4,60,000 ರೂಪಾಯಿ ಮೌಲ್ಯದ ಸೊತ್ತು ಮತ್ತು ವಾಹನವನ್ನು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಿಎಸ್‌ಎನ್‌ಎಲ್ ಟವರ್‌ನ ಬ್ಯಾಟರಿ ಕಳ್ಳತನ
ಮೂವರ ಬಂಧನ ಲಕ್ಷಾಂತರ ಮೌಲ್ಯದ ಸೊತ್ತು ವಶ
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು



