ಉಡುಪಿ:ಮಹಿಳಾ ಸಮ್ಮೇಳನ, ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸೇವಾ ಸಂಗಮ ಟ್ರಸ್ಟ್ ಸಹಯೋಗದಲ್ಲಿ ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮ್ಮೇಳನವನ್ನು ಡಿಸೆಂಬರ್ 3 ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ2 ಗಂಟೆಯವರೆಗೆ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷೆ ಸುಮತ ನಾಯಕ್ ಹೇಳಿದ್ದಾರೆ.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಚಿಂತನೆ, ಸಾಮಾಜಿಕ ಸಾಮರಸ್ಯ, ಮಹಿಳಾ ಸುರಕ್ಷೆ, ಕೃಷಿ ಇತ್ಯಾದಿ ವಿಚಾರಗಳ ಬಗ್ಗೆ ಸಮ್ಮೇಳನ ಬೆಳಕು ಚೆಲ್ಲಲಿದೆ. ಸಮ್ಮೇಳನದಲ್ಲಿ ಸುಮಾರು 1,500 ಮಹಿಳೆಯರು ಭಾಗವಹಿಸಲಿದ್ದಾರೆ ಎಂದ್ರು. ಸ್ವಾತಂತ್ರ‍್ಯ ಪೂರ್ವದಲ್ಲಿ ಹೋರಾಟ ಮಾಡಿದ ವೀರ ಮಹಿಳೆಯರ ಹಾಗೂ ಸ್ವಾತಂತ್ರ‍್ಯ ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತಹ ಮಹಿಳಾ ಸಾಧಕಿಯರ ಚಿತ್ರಗಳನ್ನು ಎಲ್ ಇಡಿ ಮೂಲಕ ಪ್ರದರ್ಶನ ಮಾಡಲಾಗುತ್ತದೆ. ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳ, ಪುಸ್ತಕ ಭಂಡಾರ ಮತ್ತು ಗೋವು ಉತ್ಪನ್ನಗಳ ಮಳಿಗೆಗಳು ಇರಲಿವೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಪ್ರತಿಭಾ ಎಂ.ಎಲ್. ಸಾಮಗ, ಗೀತಾ ಆನಂದ ಕುಂದರ್, ರೇಷ್ಮಾ ಉದಯ್ ಶೆಟ್ಟಿ, ಸುಬ್ರಹ್ಮಣ್ಯ ಹೊಳ್ಳ, ಶಶಿಕಲಾ ಕೆ. ಹೆಗ್ಡೆ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶ ಅ.1ರಿಂದ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದ ಅಧೀನಕ್ಕೆ…
ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು…
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…