ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನಡೆದ ಕ್ರೀಡಾಕೂಟವನ್ನು ರಾಜ್ಯ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದ್ರು. ಬಳಿಕ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಮೆರವಣಿಗೆಯನ್ನು ಉದ್ಘಾಟಿಸಿ ಮಾತಾನಾಡಿ, ಗ್ರಾಮೀಣ ಮಟ್ಟದಲ್ಲಿ ಒಲಿಪಿಂಗ್ ಮಾದರಿಯಲ್ಲಿ ಕ್ರೀಡಾಕೂಟ ಆಯೋಜನೆ ಮಾಡಬಹುದು ಎಂಬುದಕ್ಕೆ ಇಂದಿನ ಕ್ರೀಡಾಕೂಟ ಸಾಕ್ಷಿ. ಇದು ಸ್ವರ್ಣಾಕ್ಷರದಲ್ಲಿ ಬರೆದಿಡುವ ಸ್ಮರಣೀಯ ದಿನವಾಗಿದೆ ಸಂತಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇoದ್ರ ಕುಮಾರ್, ಹಾಗೆನೇ ರಾಜ್ಯ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ರವರು ಕ್ರೀಡಾಕೂಟಕ್ಕೆ ಶುಭಹಾರೈಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ, ರಾಮಕೃಷ್ಣ ಶಾಲಾ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು, ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಜೀವಂಧರ್ ಜೈನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.



