ಬಂಟ್ವಾಳ ತಾಲ್ಲೂಕಿನ ಮಂಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಾಜೆ ಗ್ರಾಮದಲ್ಲಿ ಸಾಮಾಜಿಕ ಪರಿಶೋಧನೆ ತಂಡ ದಿಂದ ಗ್ರಾಮದ ಕೂಲಿಕಾರ್ಮಿಕ ರಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೂಲಿ ಕೇಳುವ ಅಭಿಯಾನ ಮತ್ತು ಸಾಮಾಜಿಕ ಪರಿಶೋಧನೆ ಕುರಿತು ಅರಿವು ಆಂದೋಲನ ಕಾರ್ಯಕ್ರಮ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಸೂರ್ಯಕಾಂತ್ ಎಕಲಾರ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸಾಮಾಜಿಕ ಪರಿಶೋಧನೆ ಬೆಳ್ತಂಗಡಿ ಇವರು ಯೋಜನೆ ಅಡಿಯಲ್ಲಿ ಕ್ರಿಯಾ ಯೋಜನೆ ತಯಾರಿಕೆ, ಯೋಜನೆ ಅಡಿಯಲ್ಲಿ ಕೂಲಿಕಾರ್ಮಿಕರ ನೊಂದಾವಣಿ ಪ್ರಕ್ರಿಯೆ, ಕೆಲಸಕ್ಕಾಗಿ ಬೇಡಿಕೆ ಸಲ್ಲಿಕೆ, ಕಾಮಗಾರಿ ಸ್ಥಳದಲ್ಲಿನ ಸೌಲಭ್ಯಗಳ ಬಗ್ಗೆ, ನೊಂದಾಯಿತ ಕೂಲಿಕಾರ್ಮಿಕರ ಹಕ್ಕು ಮತ್ತು ಬಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಸಾಮಾಜಿಕ ಪರಿಶೋಧನೆ ನಿರ್ದೇಶನಾಲಯ ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ ದಕ್ಷಿಣ ಕನ್ನಡ ಇವರ ಆದೇಶ ದಂತೆ ನ. 24 ರಿಂದ ಡಿ. 02 ರವರೆಗೆ ಸಾಮಾಜಿಕ ಪರಿಶೋಧನೆ ನಡೆಯಲಿದ್ದು. 2023-24 ನೇ ಸಾಲಿನ (01/04/2022 ರಿಂದ 31/03/2023ರ ವರೆಗೆ ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ 1ನೇ ಸಾಲಿನ ಸಾಮಾಜಿಕ ಪರಿಶೋಧನೆ ತಮ್ಮ ಗ್ರಾಮ ಪಂಚಾಯಿತಿಯಲ್ಲಿ ಕೈಗೊಳ್ಳಲಾಗುತ್ತಿದ್ದು ಸಾಮಾಜಿಕ ಪರಿಶೋಧನೆಯಲ್ಲಿ ಎಲ್ಲರೂ ಸಾಮೂಹಿಕವಾಗಿ ಸ್ವಯಂ ಪ್ರೇರಿತರಾಗಿ ಒಳಗೊಳ್ಳಬೇಕಾಗಿದೆ ಎಂದು ತಿಳಿಸಿದರು. ನಂತರ ಡಿ. 02 ರಂದು ಮಂಚಿ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ಪಂಚಾಯಿತಿಯಿಂದ ಆಯೋಜಿಸಲಾಗಿದ್ದು ಎಲ್ಲರು ಭಾಗಿಯಾಗಲು ಕೋರಿದರು.
ಇದೆ ಸಂದರ್ಭದಲ್ಲಿ ಐ ಇ ಸಿ ತಾಲೂಕು ಕೋ ಆಡಿನೆಟರ್ ರಾಜೇಶ್ ಜನರಿಗೆ ನರೇಗಾ ಮತ್ತು 15 ಹಣಕಾಸು ಬಗ್ಗೆ ಮಾಹಿತಿ ಸಂವಹನ ಶಿಕ್ಷಣದ ಬಗ್ಗೆ ಮಾಹಿತಿ ನೀಡುತ್ತಾ ಫಲಾನುಭವಿಗಳು ಯಾವ ಯಾವ ಕಾಮಗಾರಿಗಳು ಮಾಡಿಕೊಳ್ಳಬಹುದೆಂದು ಮಾಹಿತಿ ನೀಡಿದರು. ಇನ್ನು ಇದೇ ಸಂದರ್ಭದಲ್ಲಿ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ರಾಜಶ್ರೀ. ಅಕ್ಷತಾ. ಪವಿತ್ರ. ಸ್ವಾತಿ. ಉಷಾ. ಪ್ರವೀಕ್ಷ. ಹಾಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು.ಜಿ. ಎಮ್. ಇಬ್ರಾಹಿಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿನಿರ್ಮಲ. ಲೆಕ್ಕ ಸಹಾಯಕರು ನವೀನ್ ರಾಬರ್ಟ್. ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು, ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…